ಲೇಖನ

ಕರ್ಣಾಟಕ ಸರಕಾರದ ಅಧಿಕೃತ ಲಾಂಚನವಾಗಿರುವ ಈ ಗಂಡಭೇರುಂಡ ಚಿಹ್ನೆಯ ಇತಿಹಾಸ ಹಾಗೂ ಪುರಾಣದ  ಹಿನ್ನಲೆ ಏನು ಗೊತ್ತಾ…?

ಅದು ಒಂದು ಪಕ್ಷಿಯ ಲಾಂಛನ. ಎರಡು ತಲೆ ಹೊಂದಿದ್ದು,ಎರಡು ತಲೆ ತದ್ವಿರುದ್ಧ ದಿಕ್ಕಿಗೆ ಇದೆ. ಇದರ ಬಗ್ಗೆ ಪುರಾಣಗಳಲ್ಲಿ ಹಲವು ಕಥೆಗಳಿದ್ದು ಇತಿಹಾಸದಲ್ಲಿ ಇದರ ಬಗ್ಗೆ ನೋಡುವುದಾದರೆ ರಾಜರುಗಳು  ಈ ಪಕ್ಷಿಯ ಚಿಹ್ನೆಗಳನ್ನು ಧ್ವಜದ ಲಾಂಛನವಾಗಿ ಬಳಸಿದರು. ಪ್ರಸ್ತುತ ಈಗ ಈ ಎರಡು ತಲೆಯ ಪಕ್ಷಿಯ ಚಿಹ್ನೆಯನ್ನು ಕರ್ನಾಟಕ ಸರಕಾರ ಅಧಿಕೃತ  ಲಾಂಛನವಾಗಿ ಬಳಸುತ್ತಿದೆ. ಈ ಲಾಂಛನದ ಹೆಸರು  ಗಂಡಭೇರುಂಡ. ಇದರ ಇತಿಹಾಸ ಹಾಗೂ ಪುರಾಣದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಮೈಸೂರು ಒಡೆಯರ ರಾಜ್ಯ ನಿರ್ಮಾಣದೊಂದಿಗೆ ಗಂಡಬೇರುಂಡ ಲಾಂಛನವು ಜೊತೆಯಾಗಿ ಬಂದು, ಇಂದಿನ ಕರ್ನಾಟಕ ಸರ್ಕಾರದ ಹಾಗೂ ಸಾರಿಗೆ ಸಂಸ್ಥೆಯ ಲಾಂಛನವಾಗಿ ಮನ್ನಣೆ ಗಳಿಸಿ ಉಳಿದುಕೊಂಡು ಬಂದಿದೆ.
ಈ ಪಕ್ಷಿಯ ಪರಿಕಲ್ಪನೆ ಆರ್ವಾಚಿನವಾದುದು. ಇದರ ಭೌಗೋಳಿಕ ವ್ಯಾಪ್ತಿ ಬಹು ವಿಶಾಲ. ಕ್ರಿ.ಪೂ.೧೦೦೦ವರ್ಷಗಳಿಗಿಂತಲೂ ಮುಂಚಿನ ಕೆಲವು ಹಿಟ್ನೆಟ್ ಕಲಾಕೇಂದ್ರಗಳಲ್ಲಿ ಗಂಡಭೇರುಂಡ ಪಕ್ಷಿಯ ಶಿಲೆ ಇದೆ. ಈಜಿಪ್ಟ್, ಅಸ್ಸೀರಿಯಾ ವೊದಲಾದ ದೇಶಗಳಲ್ಲಿ ಇದು ಫಲವಂತಿಕೆಯ ಆರಾಧನೆಗೆ(ಫರ್ಟಿಲಿಟಿ ಕಲ್ಟ್) ಸಂಬಂಧ ಪಟ್ಟ ಚಿಹ್ನೆಯಾಗಿತ್ತು ಎಂದು ಊಹಿಸಲಾಗಿದೆ. ಸಿಥಿಯನ್ನರಿಂದ ಇದು ರಷ್ಯಾ,ಜರ್ಮನಿ ಮೊದಲಾದ ದೇಶಗಳಿಗೆ ಹರಡಿತೆಂದು ಹೇಳಲಾಗಿದೆ. ತಕ್ಷಶಿಲೆಯಲ್ಲಿ ದೊರಕಿರುವ ಕ್ರಿಸ್ತಶಕಾರಂಭದ ಒಂದು ಶಿಲ್ಪ ಅತ್ಯಂತ ಪ್ರಾಚೀನವಾದುದೆಂದು ನಂಬಲಾಗಿದೆ. ಇದು ನಿಜವಾದ ಪಕ್ಷಿಯೋ, ಕಾಲ್ಪನಿಕ ಪಕ್ಷಿಯೋ ಎಂಬ ಬಗ್ಗೆ ವಿದ್ವಾಂಸರಲ್ಲಿ ಜಿಜ್ಞಾಸೆ ಇದೆ.

ಗಂಡಭೇರುಂಡ ಪಕ್ಷಿ ಭೌತಿಕವಾಗಿ ಅದನ್ನು ಅವಲೋಕಿಸಿದರೆ ಸಯಾಮಿ ಪಕ್ಷಿಯಂತೆ ಗೋಚರಿಸಿ ವಿಶೇಷವೆನಿಸುತ್ತದೆ. ಪಕ್ಷಿಯು ಎರಡು ತಲೆ, ಚೂಪಾದ ಕೊಕ್ಕು, ಎರಡು ತಲೆಯು ಎರಡು ದಿಕ್ಕಿಗೆ ಪರಸ್ಪರ ವಿರುದ್ದವಾಗಿ ನಿಂತಿದ್ದು ಒಂದೇ ಶರೀರವನ್ನು ಹೊಂದಿದೆ. ಶಿವವೊಗ್ಗ ಜಿಲ್ಲೆಯ ಬಳ್ಳಿಗಾವಿಯಲ್ಲಿರುವ ಗಂಡಭೇರುಂಡ ಪಕ್ಷಿಯ ಪ್ರತಿಮೆ ಕರ್ನಾಟಕದ ಗಂಡಭೇರುಂಡ ಶಿಲ್ಪಗಳಲ್ಲಿ ಅತ್ಯಂತ ಪ್ರಾಚೀನವಾದುದು. ಎತ್ತರವಾದ ಸ್ತಂಭದ ಮೇಲೆ ನಿಂತಿರುವ ಈ ಶಿಲ್ಪದ ಶರೀರ ಮಾನವಾಕಾರವನ್ನು ಹೊಂದಿದ್ದು, ಕಂಠದ ಮೇಲೆ ಮಾತ್ರ ಗಿಡುಗ ಪಕ್ಷಿಯ ರೀತಿಯ ಎರಡು ತಲೆಗಳಿವೆ. ಈ ಪಕ್ಷಿ ರಾಕ್ಷಸರನ್ನು ನುಂಗುತ್ತಿರುವಂತೆ ಚಿತ್ರಿತವಾಗಿದೆ. ಈ ಸ್ತಂಭದ ಅಡಿಯಲ್ಲಿರುವ ಶಾಸನದಲ್ಲಿ ಇದನ್ನು ‘ಭೇರುಂಡೇಶ್ವರ’ ಹೆಸರಿದೆ. ಇದನ್ನು ಕಲ್ಯಾಣ ಚಾಳುಕ್ಯರ ಮಹಾಮಂಡಲೇಶ್ವರನಾಗಿದ್ದ ಚಾವುಂಡರಾಯರಸ ಶಕ ೯೬೯ರಲ್ಲಿ ಇದನ್ನು ಸ್ಥಾಪಿಸಿದನೆಂದು ಅದೇ ಶಾಸನ ತಿಳಿಸುತ್ತದೆ.

ಇದರ ಪುರಾಣದ  ಹಿನ್ನೆಲೆ ನೋಡುವುದಾದರೆ,
ಋಗ್ವೇದದಲ್ಲಿ ಬರುವ ಎರಡು ಹಕ್ಕಿಗಳು, ವಿಷ್ಣುವಿನ ವಾಹನವಾದ ಗರುಡ ಇವುಗಳಿಂದ ಗಂಡಭೇರುಂಡ ಪಕ್ಷಿ ವಿಕಾಸಗೊಂಡಿರ ಬಹುದೆಂದು ಊಹಿಸಲಾಗಿದೆ.ಅಲ್ಲದೆ ವಿಷ್ಣು ನರಸಿಂಹಾವತಾರವನ್ನೆತ್ತಿ ಹಿರಣ್ಯಕಶಪುವನ್ನು ಸಂಹಾರ ಮಾಡಿದ ಮೇಲೂ ಅವನ ಕೋಪ ತಣ್ಣಗಾಗಲಿಲ್ಲವಂತೆ. ಅವನಿಂದ ಇಡೀ ವಿಶ್ವವೇ ನಾಶವಾದಿತೆಂದು ಅಂಜಿ ದೇವತೆಗಳು ಶಿವನನ್ನು ಪ್ರಾರ್ಥಿಸಿದಾಗ ಶಿವ ಶರಭಾವತಾರ ಎತ್ತಿ ನರಸಿಂಹನನ್ನು ಎದುರಿಸಿದ,ಆಗ ವಿಷ್ಣು ಶರಭನನ್ನು ಅಡಗಿಸಲು ಗಂಡಭೇರುಂಡ ಪಕ್ಷಿಯಾದನು ಎಂಬ ಕಥೆ ಕೆಲವು ಜನ ಮಾನಸದಲ್ಲಿದೆ.ಆದರೆ ಇದು ಬರೀ ಊಹಾಪೋಹ.ಸರಿಯಾದ ಅಧಾರವಿಲ್ಲದ್ದು.ಕಾಲ್ಪನಿಕ ಕಥೆಯಾಗಿದ್ದು ಯಾವ ಪೌರಾಣಿಕ ಆಧಾರಗಳೂ ಇದಕ್ಕಿಲ್ಲ.ವೇದ,ಪುರಾಣ,ಹಾಗೂ ಇನ್ಯಾವ ಹಿಂದೂ ಗ್ರಂಥಗಳಲ್ಲೂ ಇದು ಉಲ್ಲೇಖಿತವಾಗಿಲ್ಲ.

 

ಹಾಗೂ ಇದರ ಇತಿಹಾಸ ನೋಡುವುದಾದರೆ,
ಕರ್ನಾಟಕದಲ್ಲಿ ಗಂಡಭೇರುಂಡವನ್ನು ಲಾಂಛನವಾಗಿ ಬಳಸಲು ಆರಂಭವಾದ್ದು ೧೩ನೇ ಶತಮಾನದ ಉತ್ತರಾರ್ಧದಲ್ಲಿ. ಹೊಯ್ಸಳ ಅರಸ ೩ನೇ ನರಸಿಂಹ(೧೨೫೩-೧೨೯೩), ಮತ್ತು ೩ನೇ ಬಲ್ಲಾಳ(೧೨೯೩-೧೩೪೨) ಇವರ ಕಾಲದಲ್ಲಿ ಕೆಲವು ಶಿಲಾಶಾಸನಗಳ ಮೇಲೆ ಗಂಡಭೇರುಂಡ ಚಿತ್ರವಿದೆ. ವಿಜಯನಗರದ ಸಾಮ್ರಾಟನಾಗಿದ್ದ ಅಚ್ಯುತರಾಯ (೧೫೩೦-೧೫೪೨)ನ ಚಿನ್ನ ಮತ್ತು ತಾಮ್ರದ ನಾಣ್ಯಗಳ ಮೇಲೆ ಗಂಡಭೇರುಂಡದ ಮುದ್ರೆಯಿದೆ. ಇದರಲ್ಲಿ ಸೊಂಡಿಲು ಬಾಲವನ್ನೆತ್ತಿಕೊಂಡಿರುವ ಭಯಗ್ರಸ್ತವಾದ ಆನೆಗಳನ್ನು ಆ ಪಕ್ಷಿ ತನ್ನೆರಡು ಕಾಲುಗಳಲ್ಲಿ ಸಿಕ್ಕಿಸಿ ಕೊಂಡಿದೆ. ನಂತರ ಮಧುರೆಯ ನಾಯಕರು, ಕೆಳದಿಯ ಅರಸರು ಗಂಡಭೇರುಂಡವನ್ನು ಲಾಂಛನವಾಗಿ ಬಳಸಿದರು. ಮೈಸೂರು ಒಡೆಯರು ವಿಜಯನಗರ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಾಗ ತಮ್ಮ ಧ್ವಜದ ಮೇಲೆ ಗಂಡಭೇರುಂಡವನ್ನು ಪ್ರತಿಷ್ಠಾಪಿಸಿಕೊಂಡರು. ಅಂದಿನಿಂದ ಇಂದಿನವರೆವಿಗೂ ಇದು ಮೈಸೂರು ಒಡೆಯರ ಲಾಂಛನವಾಗಿ ಉಳಿದು ಬೆಳೆದು ಬಂದಿದೆ.

ಹೊಯ್ಸಳರ ಕಾಲದ ‘ನಾಶದ ಸರಪಣಿ’ಯ ಶಿಲ್ಪದಲ್ಲಿ ಗಂಡಭೇರುಂಡಕ್ಕೆ ಉಚ್ಚ ಸ್ಥಾನವನ್ನು ನೀಡಲಾಗಿದೆ. ಬೇಲೂರಿನ ಚನ್ನಕೇಶವ ದೇಗುಲ ಮತ್ತು ಕೋರಮಂಗಲದ ಬೂಜೇಶ್ವರ ದೇವಾಲಯಗಳಲ್ಲಿ ಇದನ್ನು ನೋಡಬಹುದು. ಗಂಡಭೇರುಂಡ ಚಿತ್ರ ಪ್ರಾಚೀನ ಕಾಲದಿಂದಲೂ ಪ್ರಭುತ್ವದ ಲಾಂಛನವಾಗಿ ಕರ್ನಾಟಕದ ಹಲವು ರಾಜವಂಶಗಳಲ್ಲಿ ಪ್ರಚಲಿತವಾಗಿತ್ತು. ಗಂಡಭೇರುಂಡ ಶಕ್ತಿಯ ಪರಾಕಾಷ್ಠೆಯ ಚಿಹ್ನೆ. ಬಹುಶ: ಆ ಕಾರಣಕ್ಕಾಗಿಯೋ ಏನೋ ರಾಜರು ಗಂಡಭೇರುಂಡವನ್ನು ರಾಜ ಚಿಹ್ನೆಯಾಗಿ ಬಳಸಿಕೊಂಡಿರಬಹುದು. ಮೈಸೂರು ರಾಜ್ಯ ನಿರ್ಮಾಣದೊಂದಿಗೆ ಈ ಲಾಂಛನವು ಉಳಿದು ಬಂದು ಇಂದಿನ ಕರ್ನಾಟಕ ಸರ್ಕಾರದ ಲಾಂಛನವಾಗಿ ಮನ್ನಣೆ ಗಳಿಸಿದೆ.

ಜ್ಯೋತಿಷ್ಯ ಜಾಹಿರಾತು
ಶ್ರೀ ಲಕ್ಷ್ಮೀ ಗಣಪತಿ ಜ್ಯೋತಿಷ್ಯ ಕೇಂದ್ರ
ಸರ್ವ ಸಮಸ್ಯೆಗಳಿಗೂ ಪರಿಹಾರ  ಇವರಲ್ಲಿ ಮಾತ್ರ ಸಾಧ್ಯ ಸಮಸ್ಯೆಗಳೇ ಜೀವನದಲ್ಲಿ ಹೇಳಿಕೊಳ್ಳಲಾಗದ
ಕಷ್ಟ ಸಂಕಷ್ಟಗಳಿಂದ  ನೊಂದು  ಜೀವನವೇ ಬೇಸರವಾಗಿದೆಯೇ ? ಗೆಲುವಿಗಾಗಿ ಪರಿತಪಿಸಿ ಜೀವನದಲ್ಲಿ ಸೋಲುತ್ತಿದ್ದಿರ?ಚಿಂತಿಸುವ ಅವಶ್ಯಕತೆ ಇಲ್ಲ  ಒಂದು ಕರೆ ನಿಮ್ಮ ಜೀವನವೇ  ಬದಲಾಯಿಸುತ್ತದೆ.
ನಿಮ್ಮ ಸಮಸ್ಯೆಗಳಾದ ಗಂಡ ಹೆಂಡತಿಯ ಸಮಸ್ಯೆ , ಡೈವೋರ್ಸ್ , ಕೋರ್ಟ್ ಕೇಸ,ವಿದ್ಯೆ , ಉದ್ಯೋಗ , ಮದುವೆ ವಿಳಂಬ , ಇಷ್ಟಪಟ್ಟವರು ನಿಮ್ಮಂತ ಆಗಲು , ಬಿಸಿನೆಸ್ ನಲ್ಲಿ ಲಾಭ – ನಷ್ಟ , ರಾಜಕೀಯ , ವಿದೇಶ ಪ್ರಯಾಣ , ಸಾಲದಬಾದೆ , ಶತ್ರು ಪೀಡೆ , ಎಷ್ಟೇ ಸಂಪತ್ತಿದ್ದರೂ ಮನಶಾಂತಿಯ ಕೊರತೆ , ಎಷ್ಟೇ ಪ್ರಯತ್ನ ಪಟ್ಟರೂ ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆ ಆಗದೇ ನೊಂದಿದ್ದರೆ , ಇನ್ನು ನಿಮ್ಮ ಜೀವನದ ಯಾವುದೇ ಗುಪ್ತ ಹಾಗೂ ಕಠಿಣ ಸಮಸ್ಯೆಗಳೇನೆ ಇದ್ದರು ಅದರ ಮೂಲವನ್ನು ಶೋದಿಸಿ ಶೀಘ್ರ ಹಾಗೂ ಶಾಶ್ಟತ ಪರಿಹಾರ ಮಾಡಿಕೊಡುತ್ತಾರೆ.
ಪ್ರಖ್ಯಾತ ಸ್ತ್ರೀ-ಪುರುಷ ವಶಿಕರಣ ಸ್ಪೆಷಲಿಸ್ಟ್
ಪಂಡಿತ ಹೆಚ್ ಡಿ ಶರ್ಮಾ
ಮೊ:99 86 55 05 46

Related Articles

Leave a Reply

Your email address will not be published. Required fields are marked *

Back to top button
google.com, pub-7043077280577910, DIRECT, f08c47fec0942fa0

You cannot copy content of this page

Close