ಜಿಲ್ಲಾ ಸುದ್ದಿ
ಚಾಲಕನ ನಿಯಂತ್ರಣ ತಪ್ಪಿ ಕಾರ್ ಡಿಕ್ಕಿ, ಮೃತಪಟ್ಟ ಚಾಲಕ

ಯಲ್ಲಾಪುರ: ತಾಲೂಕಿನ ಗುಳ್ಳಾಪುರ ಸಮೀಪ ಕಾರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಹುಬ್ಬಳ್ಳಿ ಕಡೆಯಿಂದ ಗುಳ್ಳಾಪುರ ಮಾರ್ಗವಾಗಿ ಸ್ವಿಪ್ಟ್ ಡಿಜೈರ್ ಕಾರ್ ಅತೀ ವೇಗ ಹಾಗೂ ನಿಷ್ಕಾಳಜಿತನದಿಂದ ಚಲಾಯಿಸಿಕೊಂಡು ಬಂದ ಚಾಲಕ ಹಜರತ್ ಅಲಿ ಕಾರ್ ನಿಯಂತ್ರಣಕ್ಕೆ ಸಿಗದೆ ರಸ್ತೆ ಪಕ್ಕದ ಮರವೊಂದಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಆತ ಮೃತಪಟ್ಟಿದ್ದಾನೆ. ಯಲ್ಲಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


