ಪ್ರಮುಖ
ದೆಹಲಿ ತಲುಪಿದ ಸಿದ್ದರಾಮಯ್ಯ, ಡಿಕೆಶಿ:ಸಂಪುಟ ರಚನೆ ಬಗ್ಗೆ ವರಿಷ್ಠರ ಜೊತೆ ಚರ್ಚೆ

ಬೆಂಗಳೂರು: ಅಭೂತಪೂರ್ವ ಬಹುಮತದ ಮೂಲಕ ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಆಯ್ಕೆಯ ಪ್ರಹಸನ ಮುಗಿದು ಈಗ ಸಂಪುಟ ರಚನೆಯ ಕಸರತ್ತು ಆರಂಭವಾಗಿದೆ.
ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಸಂಪುಟ ರಚನೆ ಕುರಿತು ಚರ್ಚಿಸಲು ದೆಹಲಿಗೆ ತಲುಪಿದ್ದಾರೆ. ಇಂದು ಮಧ್ಯಾಹ್ನ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಗುರುವಾರ ರಾತ್ರಿಯೇ ನೂತನ ಸಚಿವರ ಪಟ್ಟಿ ಅಂತಿಮವಾಗಲಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಜೊತೆಗೆ ಹಲವು ಶಾಸಕರೂ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ನಡುವೆ ಕೆಲ ಶಾಸಕರು ದೆಹಲಿಯಲ್ಲೇ ಬೀಡು ಬಿಟ್ಟಿದ್ದು, ಸಚಿವ ಸ್ಥಾನಕ್ಕೆ ಲಾಬಿ ಮುಂದುವರಿಸಿದ್ದಾರೆ.