ಶಾಂತಿ, ಸುವ್ಯವಸ್ಥೆ ಹದಗೆಟ್ಟರೆ ಪೋಲೀಸ ಅಧಿಕಾರಿಗಳೇ ಹೊಣೆ: ಸಿಎಂ, ಡಿಸಿಎಂ ಎಚ್ಚರಿಕೆ

ಬೆಂಗಳೂರು: ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸಿ. ಶಾಂತಿ- ಸುವ್ಯವಸ್ಥೆ ಹದಗೆಟ್ಟರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಪೋಲೀಸ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ವಿಧಾನಸೌಧದಲ್ಲಿ ಹಿರಿಯ ಪೋಲೀಸ ಅಧಿಕಾರಿಗಳ ಸಭೆ ನಡೆಸಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು. ಪೋಲೀಸರು ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅಧಿಕಾರಿಗಳು ಕೆಲಸ ಮಾಡಬೇಕು. ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುತ್ತೇನೆ. ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಮಾದಕ ವಸ್ತು ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು. ಪೋಲೀಸ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೆÇಲೀಸ್ ಠಾಣೆಗೆ ಸಮಸ್ಯೆ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೆÇಲೀಸ್ ಅಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‍ಗಳ ಚಟುವಟಿಕೆಗಳು, ಡ್ರಗ್ ಮಾಫಿಯಾವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಅವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‍ಗಿರಿ ನೀಡುತ್ತೇವೆ. ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುವುದಾಗಿ ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಕೆ.ಹೆಚ್ ಮುನಿಯಪ್ಪ, ಬಿ.ಝಡ್. ಜಮೀರ್ ಅಹ್ಮದ್ ಖಾನ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ಉಪಸ್ಥಿತರಿದ್ದರು.
ಕೇಸರೀಕರಣ ಮಾಡಲು ಹೊರಟಿದ್ದೀರಾ?
ಪೋಲೀಸಅಧಿಕಾರಿಗಳಿಗೆ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ತರಾಟೆಗೆ ತೆಗೆದುಕೊಂಡರು. ಪೋಲೀಸ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ ನೀವು..? ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡುವುದಿಲ್ಲ. ಮಂಗಳೂರು, ವಿಜಯಪುರ, ಬಾಗಲಕೋಟದಲ್ಲಿ ನೀವು ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿದ್ರಿ ಅಂತಾ ಗೊತ್ತಿದೆ. ಈ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ದೇಶದ ಬಗ್ಗೆ ಗೌರವ ಇದ್ರೆ ರಾಷ್ಟ್ರ ಧ್ವಜ ಹಾಕೊಂಡು ಕೆಲಸ ಮಾಡಬೇಕಿತ್ತು. ನಮ್ಮ ಸರ್ಕಾರದಲ್ಲಿ ಪೋಲೀಸ ಇಲಾಖೆಯನ್ನ ಕೇಸರಿಕರಣ ಮಾಡಲು ನಾವು ಬಿಡುವುದಿಲ್ಲ ಎಂದು ಖಡಕ್ ಆಗಿ ಹೇಳಿದರು.
ಪಿಎಸ್‍ಐ ಅಕ್ರಮದಲ್ಲಿ ಒಬ್ಬ ಎಡಿಜಿಪಿ ಔಒಖ ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ನೋಡಿ. ಪ್ರೆಸ್ ಕಾನ್ಫರೆನ್ಸ್ ಮಾಡಿ ಪ್ರಕರಣ ಬಯಲಿಗೆ ತಂದವರನ್ನೇ ಹೆರಾಸ್‍ಮೆಂಟ್ ಮಾಡಿದ್ದೀರಾ. ಪ್ರಿಯಾಂಕ್ ಖರ್ಗೆ ಅವರಿಗೆ ಕಾಟ ಕೊಟ್ಟಿದ್ದೀರಾ. ಇಡೀ ದೇಶದಲ್ಲಿ ಕರ್ನಾಟಕ ಪೋಲೀಸ ಇಲಾಖೆಗೆ ಒಳ್ಳೆಯ ಹೆಸರಿತ್ತು. ಆ ಗೌರವ, ಘನತೆಯನ್ನು ಹಾಳು ಮಾಡಿದ್ದೀರ ನೀವು. ಎಲ್ಲಿ ನೋಡಿದ್ರು ಬರೀ ಕಾಸು, ಕಾಸು, ಕಾಸು. ನಮ್ಮ ಸರ್ಕಾರದಲ್ಲಿ ಎಲ್ಲವೂ ಕ್ಲೀನ್ ಆಗಬೇಕು. ಜನ ಈ ಸರ್ಕಾರದಿಂದ ಬಹುದೊಡ್ಡ ಬದಲಾವಣೆಯನ್ನು ನಿರೀಕ್ಷೆ ಮಾಡಿದ್ದಾರೆ. ಅದು ಪೋಲೀಸ ಇಲಾಖೆಯಿಂದ ಶುರು ಆಗಬೇಕು ಎಂದು ಸೂಚಿಸಿದರು.
ಈ ಸರ್ಕಾರದಿಂದ ಬದಲಾವಣೆ ಸಂದೇಶ ಜನರಿಗೆ ಹೋಗಬೇಕು. ನಿಮ್ಮಿಂದ ನಮಗೆ ನಯಾಪೈಸೆ ಹಣ ಬೇಕಿಲ್ಲ. ನೀವು ಯಾರಿಗೂ ಹಣ ಕೊಡೋದು ಬೇಡ. ಜನ ನರಳದಂತೆ ಉತ್ತಮವಾಗಿ ಕೆಲಸ ಮಾಡಿದ್ರೆ ಸಾಕು. ನಿಮ್ಮ ಹಿಂದಿನ ವರ್ತನೆ ನಮ್ಮ ಸರ್ಕಾರದಲ್ಲಿ ನಡೆಯುವುದಿಲ್ಲ. ಹಿಂದೆ ಪೇಸಿಎಂ ಅಭಿಯಾನ ಮಾಡಿದಾಗ ನನ್ನ ಮತ್ತು ಸಿದ್ದರಾಮಯ್ಯರ ಜೊತೆ ಹೇಗೆ ನಡೆದುಕೊಂಡಿದ್ದೀರಾ ಅನ್ನೋದು ಗೊತ್ತಿದೆ. ನಮ್ಮ ಮೇಲೆ ಕೇಸ್ ಹಾಕಿದ್ರಿ. ನಮ್ಮ ಕಾರ್ಯಕರ್ತರ ವಿರುದ್ಧ ಸುಳ್ಳು, ಸುಳ್ಳು ಸಾವಿರಾರು ಕೇಸ್ ಹಾಕಿದ್ರಿ. ಅವರನ್ನು ಹರಾಸ್‍ಮೆಂಟ್ ಮಾಡಿದ್ರಿ. ನಮ್ಮನ್ನು, ಸಿದ್ದರಾಮಯ್ಯ ಅವರನ್ನೇ ಬಿಡದ ನೀವು ಇನ್ನು ಸಾಮಾನ್ಯ ಜನರನ್ನು ಬಿಡ್ತೀರಾ? ಎಂದು ಡಿಕೆಶಿ ಪ್ರಶ್ನಿಸಿದರು.
ಆದರೆ ಎದುರು ಪಾರ್ಟಿ ವಿರುದ್ಧ ಮಾತ್ರ ಯಾವುದೇ ಕೇಸ್ ಹಾಕಲಿಲ್ಲ. ಅವರ ಜತೆ ಶಾಮೀಲಾಗಿದ್ರಿ. ಟಿಪ್ಪು ಸುಲ್ತಾನ್ ಅವರನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಕೊಲೆ ಮಾಡಲು ಕರೆ ನೀಡಿದ, ಪ್ರೇರಣೆ ನೀಡಿದವರ ವಿರುದ್ಧ ಯಾಕೆ ಕೇಸ್ ಹಾಕಲಿಲ್ಲ ನೀವು? ಅದು ಕ್ರೈಂ ಅಲ್ವಾ?. ನೀವು ಏನೇನೂ ಮಾಡಿದ್ದೀರಾ ಅಂತ ನಮ್ಮ ಬಳಿ ಸಾಕ್ಷಿ ಇವೆ. ನಾವು ಎಲ್ಲವನ್ನೂ ವಾಚ್ ಮಾಡಿದ್ದೇವೆ. ಇವೆಲ್ಲ ನಮ್ಮ ಸರ್ಕಾರದಲ್ಲಿ ನಡೆಯುವುದಿಲ್ಲ. ನೀವು ಬದಲಾಗಬೇಕು. ನಿಮ್ಮ ವರ್ತನೆ ಬದಲಾಗಬೇಕು. ಇಲ್ಲ ಅಂದ್ರೆ ನಿಮ್ಮನ್ನೇ ಬದಲಾವಣೆ ಮಾಡಬೇಕಾಗುತ್ತದೆ ಎಂದರು.
ಪ್ರಾಮಾಣಿಕವಾಗಿ ಕೆಲಸ ಮಾಡಿ: ನಾವು ದ್ವೇಷ ಸಾಧಿಸೋದಿಲ್ಲ. ಅದರಲ್ಲಿ ನಮಗೆ ನಂಬಿಕೆ ಇಲ್ಲ. ನೀವು ಬದಲಾಗಿ, ಹಳೆಯದು ಬಿಡಿ. ಹೊಸದಾಗಿ ಕೆಲಸ ಶುರು ಮಾಡಿ. ಜನರ ನೆಮ್ಮದಿ ಕಾಪಾಡಿ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ರೆ ನಾವು ನಿಮ್ಮ ಜೊತೆ ಇರುತ್ತೇವೆ. ಈ ಸರ್ಕಾರದ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ. ಅದನ್ನ ಉಳಿಸಿಕೊಳ್ಳಿ. ಈ ಸರ್ಕಾರದಿಂದ ಬದಲಾವಣೆ ಆಗುತ್ತಿದೆ ಎಂಬ ಸಂದೇಶವನ್ನು ನಿಮ್ಮ ಕೆಲಸದ ಮೂಲಕ ಜನರಿಗೆ ನೀಡಿ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಇನ್ನುಮುಂದೆ ನೈತಿಕ ಪೋಲೀಸಗಿರಿಗೆ ಅಂತ್ಯ ಹಾಡುತ್ತೇವೆ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇನ್ನುಮುಂದೆ ನೈತಿಕ ಪೆÇಲೀಸ್ ಗಿರಿ ಇರಲ್ಲ, ನೈತಿಕ ಪೆÇಲೀಸ್ ಗಿರಿಗೆ ಅಂತ್ಯ ಹಾಡಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆÇಲೀಸ್ ಹಿರಿಯ ಅಧಿಕಾರಿಗಳ ಜೊತೆ ಸಭೆಯನ್ನು ನಡೆಸಿದ್ದೇನೆ. ಪೆÇಲೀಸ್ ಇಲಾಖೆ ಜನಸ್ನೇಹಿಯಾಗಿ ಇರಬೇಕು. ದೂರು ಕೊಡಲು ಬಂದವರ ಜೊತೆ ಸೌಜನ್ಯಯುತವಾಗಿ ನಡೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.ಆಯಾ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮಗಳು ನಡೆದಲ್ಲಿ ಅದಕ್ಕೆ ಕೇವಲ ಪೆÇಲೀಸ್ ಇನ್ಸ್‍ಪೆಕ್ಟರ್ ಮಾತ್ರ ಅಲ್ಲ, ಆ ವ್ಯಾಪ್ತಿಯ ಡಿಸಿಪಿ ಕೂಡಾ ಜವಾಬ್ದಾರಿ ಆಗುತ್ತಾರೆ. ಕಾನೂನು ಪಾಲನೆ ಮಾಡುವಾಗ ಯಾವುದೇ ಧರ್ಮ ನೋಡಬೇಡಿ. ಧರ್ಮಾತೀತವಾಗಿ ಕಾನೂನು ಪಾಲನೆ ಮಾಡಬೇಕು ಎಂದು ಪೆÇಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೆÇಲೀಸ್ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‍ಗಳ ಚಟುವಟಿಕೆಗಳು, ಡ್ರಗ್ ಮಾಫಿಯಾ ವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‍ಗಿರಿ ನೀಡುತ್ತೇವೆ. ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೇ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.