
ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ 17 ವರ್ಷ ವಯೋಮಾನದ ಪ್ರೌಢಶಾಲಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅಂಕೋಲಾದ ಆರ್.ಪಿ.ಎಸ್. ಸೆಕೆಂಡರಿ ಸ್ಕೂಲ್, ಬೆಳಸೆ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿ ಚೈತ್ರಾ ಮಾದೇವ ಗೌಡ ಅವರು 3 ಕಿ.ಮೀ. ನಡಿಗೆ ಸ್ಪರ್ಧೆಯಲ್ಲಿ ಉತ್ತಮ ಸಾಧನೆಗೈದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಚೈತ್ರಾ ಗೌಡ ಅವರ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿದೆ.
ವಿದ್ಯಾರ್ಥಿನಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಕರಾದ ಸುಧೀರ ರಾವ್. ಕೆ. ಅವರಿಗೂ ಅಭಿನಂದನೆ ಸಲ್ಲಿಸಲಾಗಿದೆ. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಮುಖ್ಯಾಧ್ಯಾಪಕರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ಊರ ನಾಗರಿಕರು ಚೈತ್ರಾ ಗೌಡ ಅವರ ಸಾಧನೆಯನ್ನು ಅಭಿನಂದಿಸಿ, ರಾಜ್ಯ ಮಟ್ಟದ ಸ್ಪರ್ಧೆಯಲ್ಲೂ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ.
