UK Express Logo

ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

By UKExpress on 9/9/2026

ಕಾರವಾರ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಅದರ ಅಧೀನದ ವಿವಿಧ ನಿಗಮಗಳ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ (ಹೊಸದು ಹಾಗೂ ನವೀಕರಣ), ಸ್ವಾವಲಂಬಿ ಸಾರಥಿ ಯೋಜನೆ, ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.

ಇದರೊಂದಿಗೆ ಮರಾಠಾ ನಿಗಮದ ಮಿಲಿಟ್ರಿ ಹೊಟೇಲ್ ಯೋಜನೆ, ವೀರಶೈವ ಲಿಂಗಾಯತ ನಿಗಮದ ವಿಭೂತಿ ಘಟಕ ನಿರ್ಮಾಣ ಯೋಜನೆ, ಡಿ. ದೇವರಾಜ ಅರಸು ನಿಗಮದ ಹೊಲಿಗೆ ಯಂತ್ರ ವಿತರಣೆ ಯೋಜನೆ ಹಾಗೂ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗಳಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ.

ಅರ್ಹ ಅಭ್ಯರ್ಥಿಗಳು ಸೆ. 30ರೊಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗೆ ಕೌಶಲ್ಯ ಕರ್ನಾಟಕ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬೇಕು.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರತಿ ಹಾಗೂ ಅಗತ್ಯ ದಾಖಲೆಗಳನ್ನು ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಹೈ ಚರ್ಚ್ ಹತ್ತಿರ, ಕಾರವಾರ ಕಚೇರಿಗೆ ಸಲ್ಲಿಸಬೇಕು.

2024-25 ಹಾಗೂ 2025-26ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೆ ಇರುವ ಫಲಾನುಭವಿಗಳು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ ಅಥವಾ ಸಹಾಯವಾಣಿ 08382-223229, 080-22374832 ಹಾಗೂ 8050770004 ಸಂಪರ್ಕಿಸಬಹುದು ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.