UK Express Logo

ಭಟ್ಕಳದಲ್ಲಿ ಬಾಲಕಿ ಅಪಹರಣ ಯತ್ನ: ಇಬ್ಬರು ಆರೋಪಿಗಳ ಬಂಧನ

By UKExpress on 8/17/2025

Screenshot-20250816-210819-Public-Next ಭಟ್ಕಳ: ಹನೀಫಾಬಾದ್ 1ನೇ ಕ್ರಾಸ್‌ನಿಂದ ಬಾಲಕಿಯೊಬ್ಬಳನ್ನು ಬಲವಂತವಾಗಿ ವಾಹನಕ್ಕೆ ಕೂರಿಸಿಕೊಂಡು ಹೋಗಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಭಟ್ಕಳ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು, ಅಪಹರಣ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಬಾಲಕಿಯನ್ನು ರಕ್ಷಿಸಿದ್ದಾರೆ.

ಬುಧವಾರ ರಾತ್ರಿ ನಡೆದ ಈ ಘಟನೆಯಲ್ಲಿ, ಬೊಲೆರೊ ಪಿಕ್‌ಅಪ್ ವಾಹನದಲ್ಲಿ ಬಂದ ಇಬ್ಬರು ವ್ಯಕ್ತಿಗಳು ಬಾಲಕಿಯನ್ನು ಅಪಹರಿಸಲು ಯತ್ನಿಸಿದ್ದರು. ಈ ಬಗ್ಗೆ ಬಾಲಕಿಯ ತಾಯಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಹಾವೇರಿ ಜಿಲ್ಲೆಯ ಶಿವಪುರದ ಆಸಿಫ್ ಜಮಾಲಸಾಬ್ ಹಾಗೂ ಭಟ್ಕಳದ ಜಾಲಿ ತಗ್ಗರಗೋಡ ನಿವಾಸಿ ಮೊಹಮ್ಮದ್ ಮೋಸಿನ್ ಎಂಬ ಆರೋಪಿಗಳನ್ನು ಸಿದ್ದಾಪುರದ ಮಾವಿನಗುಂಡಿ ಬಳಿ ಬಂಧಿಸಿದ್ದಾರೆ.

ಸಿಪಿಐ ಮಂಜುನಾಥ ಲಿಂಗಾರೆಡ್ಡಿ ಅವರ ಮಾರ್ಗದರ್ಶನದಲ್ಲಿ, ಎಎಸ್‌ಐ ನಾರಾಯಣ, ಹೆಡ್ ಕಾನ್‌ಸ್ಟೇಬಲ್ ನಾರಾಯಣ ಮತ್ತು ಸಿಬ್ಬಂದಿ ಅಕ್ಷಯಕುಮಾರ ಅವರನ್ನು ಒಳಗೊಂಡ ತಂಡವು ಕೇವಲ ಆರು ಗಂಟೆಗಳ ಒಳಗಾಗಿ ಆರೋಪಿಗಳನ್ನು ಹಿಡಿದು ಬಾಲಕಿಯನ್ನು ಸುರಕ್ಷಿತವಾಗಿ ಪಾಲಕರಿಗೆ ಒಪ್ಪಿಸಿದೆ.

ಈ ಯಶಸ್ವಿ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿಲೀಪನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.