ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಬಾಲು ನಾಯಕ: ಉತ್ತರ ಕನ್ನಡ ಬಿಜೆಪಿ ಮುಖಂಡರು, ಕಾರ್ಯಕರ್ತರ ಭಾಗಿ

ಕಾರವಾರ: ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆಯ 9ನೇ ದಿನದ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.
ಬುಧವಾರ ಬೆಳಿಗ್ಗೆ ಬಳ್ಳಾರಿ ಜಿಲ್ಲೆಯ ಕುಡ್ತಿನಿ ಗ್ರಾಮದಿಂದ ಆರಂಭಗೊಂಡ ಪಾದಯಾತ್ರೆಯಲ್ಲಿ ಯಲ್ಲಾಪುರದ ಉದ್ಯಮಿ ಹಾಗೂ ಯುವ ಮುಖಂಡ ಬಾಲು ನಾಯಕ ಅವರು ತಮ್ಮ ಬೆಂಬಲಿಗರೊಂದಿಗೆ ಪಾಲ್ಗೊಂಡು ಬಿಜೆಪಿ ಮುಖಂಡರೊಂದಿಗೆ ಹೆಜ್ಜೆ ಹಾಕಿದರು. ಈ ವೇಳೆ ಕೋಟಾ ಶ್ರೀನಿವಾಸ ಪೂಜಾರಿ, ರೂಪಾಲಿ ನಾಯ್ಕ ಸೇರಿದಂತೆ ಹಲವು ಬಿಜೆಪಿ ಮುಖಂಡರನ್ನು ಭೇಟಿಯಾದರು.
ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಹಾಗೂ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮಕುಮಾರ ನಾಯ್ಕ ಹಾಗೂ ಜಿಲ್ಲೆಯ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್, ಬನವಾಸಿ ಮಂಡಳ ಅಧ್ಯಕ್ಷ ರಮೇಶ ನಾಯ್ಕ, ಯಲ್ಲಾಪುರ ಬಿಜೆಪಿ ಮಂಡಲ ಅಧ್ಯಕ್ಷ ಪ್ರಸಾದ ಹೆಗಡೆ, ನಗರ ಘಟಕದ ಅಧ್ಯಕ್ಷ ಸೋಮೇಶ್ವರ ನಾಯ್ಕ, ಯುವಮೋರ್ಚಾದ ರಜತ್ ಬದ್ವಿ, ವಿನೋದ ತಳೇಕರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಯಲ್ಲಾಪುರ ಕ್ಷೇತ್ರದ ಬಿಎಲ್‌ಎ-1 ರಾಘು ಭಟ್ ಹಾಸಣಗಿ, ಬನವಾಸಿ ಮಂಡಲ ರೈತ ಮೋರ್ಚಾ ಅಧ್ಯಕ್ಷ ಮಣಿಕಂಠ ಎಂ. ಪಾಟೀಲ, ಯುವ ಮೋರ್ಚಾ ಉಪಾಧ್ಯಕ್ಷ ಕೃಷ್ಣಮೂರ್ತಿ ನಾಯ್ಕ ಬೆಂಗಳೆ, ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ ನಾಯ್ಕ ಉಪ್ಪಳೆಕೊಪ್ಪ, ನಾಗರಾಜ ಹೆಗಡೆ, ರಾಜೇಂದ್ರ ಶಿವಾಜಿ ಗೌಡರ್, ಪವನಕುಮಾರ್ ಕೇಸರಕರ್ ಸೇರಿದಂತೆ ಹಲವರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.
10 ದಿನಗಳ ಕಾಲ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಬಿಜೆಪಿ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ. ಸರ್ಕಾರದ ಆಡಳಿತ ವೈಫಲ್ಯಗಳು, ವಿವಿಧ ಇಲಾಖೆಗಳ ಕಾರ್ಯವೈಖರಿ ಹಾಗೂ ಜನಸಾಮಾನ್ಯರಿಗೆ ಸಂಬಂಧಿಸಿದ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಈ ಹೋರಾಟ ನಡೆಸುತ್ತಿದೆ.
ಪಾದಯಾತ್ರೆ ಅಂತಿಮ ಹಂತದತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದ್ದು, ಉತ್ತರ ಕನ್ನಡ ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿರುವುದು ಗಮನ ಸೆಳೆಯಿತು.
