
ಹೊನ್ನಾವರ: ತಾಲೂಕಿನ ಅಳ್ಳಂಕಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಮಿಥುನ ಪ್ರಭಾಕರ ನಾಯ್ಕ ಅವರು ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇದೇ ಕಾಲೇಜಿನ ವಿದ್ಯಾರ್ಥಿ ವಿಶಾಲ ರಾಜು ನಾಯ್ಕ ಅವರು ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಈ ಕ್ರೀಡಾ ಸಾಧನೆಗೆ ಅಳ್ಳಂಕಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರು, ಸಿಬ್ಬಂದಿ ಹಾಗೂ ಅಭಿವೃದ್ಧಿ ಸಮಿತಿಯವರು ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಮಿಥುನ ನಾಯ್ಕ ಉತ್ತಮ ಸಾಧನೆ ಮಾಡಲಿ ಎಂದು ಶುಭ ಹಾರೈಸಿದ್ದಾರೆ.
