UK Express Logo

ಎಸ್‌ಐಆರ್ ನೋಟಿಸ್‌ಗಳಿಗೆ ವಯಸ್ಕ ಕುಟುಂಬ ಸದಸ್ಯರು ಹಾಜರಾಗಿ ದಾಖಲೆ ಸಲ್ಲಿಸಬಹುದು

By UKExpress on 9/11/2026

ಕಾರವಾರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರು, ಅಂಗವಿಕಲರು, ಅನಾರೋಗ್ಯ ಪೀಡಿತರು ಹಾಗೂ ವಿದೇಶದಲ್ಲಿರುವ ಮತದಾರರಿಗೆ ನೀಡಲಾಗಿರುವ ನೋಟಿಸ್‌ಗಳ ವಿಲೇವಾರಿಗೆ ಸಂಬಂಧಿಸಿದಂತೆ, ಅವರ ವಯಸ್ಕ ಕುಟುಂಬ ಸದಸ್ಯರು ಮತದಾರರ ಪರವಾಗಿ ಹಾಜರಾಗಿ ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

ಸಂಬಂಧಿಸಿದ ಮತದಾರರು ವೈಯಕ್ತಿಕವಾಗಿ ಹಾಜರಾಗಲು ಸಾಧ್ಯವಾಗದ ಸಂದರ್ಭದಲ್ಲಿ, ಅವರ ವಯಸ್ಕ ಕುಟುಂಬ ಸದಸ್ಯರು ನಿಗದಿತ ಪ್ರಕ್ರಿಯೆಯಂತೆ ಹಾಜರಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಬಹುದಾಗಿದೆ. ಈ ಮೂಲಕ ಅರ್ಹ ಮತದಾರರಿಗೆ ಯಾವುದೇ ಅನಾನುಕೂಲವಾಗದಂತೆ ಎಸ್‌ಐಆರ್ ನೋಟಿಸ್‌ಗಳ ವಿಲೇವಾರಿ ಪ್ರಕ್ರಿಯೆ ಕೈಗೊಳ್ಳಲು ಕ್ರಮ ವಹಿಸಲಾಗಿದೆ.