
ಕಾರವಾರ: ಕೈಗಾರಿಕಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕೈಗಾರಿಕೋದ್ಯಮಿಗಳಿಗೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ.
ಹೊಸದಾಗಿ ಅತೀ ಸಣ್ಣ ಮತ್ತು ಸಣ್ಣ ಕೈಗಾರಿಕಾ ಘಟಕಗಳನ್ನು ಆರಂಭಿಸುವ ಉದ್ಯಮಿಗಳಿಗೆ, ಬ್ಯಾಂಕ್‌ಗಳಿಂದ ಪಡೆದ ಸಾಲವನ್ನು ಹೊರತುಪಡಿಸಿ, ಅವರು ಸ್ವತಃ ತೊಡಗಿಸುವ ಬಂಡವಾಳದ ಶೇ.50ರಷ್ಟು ಮೊತ್ತವನ್ನು ಬಡ್ಡಿರಹಿತ ಸಾಲದ ರೂಪದಲ್ಲಿ ನೀಡಲಾಗುತ್ತದೆ. ಅಲ್ಲದೇ ಘಟಕದ ಸ್ಥಿರ ಬಂಡವಾಳದ ಶೇ.60ರಷ್ಟು ಸಹಾಯಧನ ಒದಗಿಸಲಾಗುತ್ತದೆ.
ಬ್ಯಾಂಕ್‌ಗಳಿಂದ ಸಾಲ ಪಡೆಯುವ ಸಂದರ್ಭದಲ್ಲಿ ವಿಧಿಸಲಾಗುವ ಸಾಲ ಪ್ರಕ್ರಿಯೆ ಶುಲ್ಕವನ್ನು ಮರುಪಾವತಿಸಲಾಗುತ್ತದೆ. ವಿದ್ಯುತ್ ಇಲಾಖೆಯಿಂದ ವಿಧಿಸಲಾಗುವ ವಿದ್ಯುತ್ ಶುಲ್ಕದಲ್ಲಿಯೂ ರಿಯಾಯಿತಿ ನೀಡಲಾಗುತ್ತದೆ.
ಈ ಸೌಲಭ್ಯಗಳು ಗುರಿ ಆಧಾರಿತವಾಗಿದ್ದು, ಹೊಸದಾಗಿ ಅತೀ ಸಣ್ಣ ಮತ್ತು ಸಣ್ಣ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉದ್ಯಮಿಗಳು ಸೆ.15ರೊಳಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಶಿರವಾಡ, ಕಾರವಾರ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
