ಜಿಲ್ಲಾ ಮಟ್ಟದ ಯುವ ಸಂಸತ್ತು ಸ್ಪರ್ಧೆ: ಪ್ರಾರ್ಥನಾ ಹೆಗಡೆಗೆ ಪ್ರಥಮ, ಅಂಕಿತ ಹೆಗಡೆಗೆ ದ್ವಿತೀಯ ಸ್ಥಾನ

ಶಿರಸಿ: ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಶಿರಸಿಯ ಎಂಇಎಸ್‌ನ ಎಂ.ಎಂ. ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಕು. ಪ್ರಾರ್ಥನಾ ಹೆಗಡೆ ಹಾಗೂ ಕು. ಅಂಕಿತ ಹೆಗಡೆ ಗಮನಾರ್ಹ ಸಾಧನೆ ಮಾಡಿದ್ದಾರೆ.
ಸ್ಪರ್ಧೆಯಲ್ಲಿ ಪ್ರಾರ್ಥನಾ ಹೆಗಡೆ ಪ್ರಥಮ ಸ್ಥಾನ ಹಾಗೂ ಅಂಕಿತ ಹೆಗಡೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಇಬ್ಬರೂ ರಾಜ್ಯಮಟ್ಟದ ಯುವ ಸಂಸತ್ತು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯರ ಈ ಸಾಧನೆಗೆ ಎಂಇಎಸ್ ಅಧ್ಯಕ್ಷ ಜಿ.ಎಂ. ಹೆಗಡೆ ಮುಳಖಂಡ, ಉಪಸಮಿತಿ ಅಧ್ಯಕ್ಷ ಎಸ್.ಕೆ. ಭಾಗ್ವತ್, ಪದಾಧಿಕಾರಿಗಳು, ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಜಿ.ಟಿ. ಭಟ್, ಪ್ರಾಧ್ಯಾಪಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
