ಕಾರವಾರ ಕ್ರಿಮ್ಸ್‌ನಲ್ಲಿ ಅಲೈಡ್ ಹೆಲ್ತ್ ಸೈನ್ಸಸ್ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕಾರವಾರ: ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕ್ರಿಮ್ಸ್)ಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಅಲೈಡ್ ಹೆಲ್ತ್ ಸೈನ್ಸಸ್ (Allied Health Sciences) ಪದವಿ ಕೋರ್ಸ್‌ಗಳ ಖಾಲಿ ಇರುವ ಸೀಟುಗಳ ಭರ್ತಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಸ್ಥೆಯಲ್ಲಿ ಬಿ.ಎಸ್ಸಿ. ಆಪರೇಷನ್ ಥಿಯೇಟರ್ ಮತ್ತು ಅನಸ್ತೇಶಿಯಾ ಟೆಕ್ನಾಲಜಿ (B.Sc. OT & AT) ಕೋರ್ಸ್‌ನಲ್ಲಿ 10 ಸೀಟುಗಳು ಹಾಗೂ ಬಿ.ಎಸ್ಸಿ. ಮೆಡಿಕಲ್ ಲ್ಯಾಬೊರೇಟರಿ ಟೆಕ್ನಾಲಜಿ (BMLT) ಕೋರ್ಸ್‌ನಲ್ಲಿ 21 ಸೀಟುಗಳು ಖಾಲಿ ಇವೆ.
ಪ್ರವೇಶಾತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ 2026ನೇ ಸಾಲಿನ ಪರೀಕ್ಷೆಯನ್ನು ಬರೆದಿರಬೇಕು. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ ಕಾಲೇಜಿಗೆ ಭೇಟಿ ನೀಡಲು ನವೆಂಬರ್ 15 ಕೊನೆಯ ದಿನವಾಗಿದೆ.
ಅರ್ಹ ವಿದ್ಯಾರ್ಥಿಗಳು ಅಗತ್ಯ ಮೂಲ ದಾಖಲೆಗಳೊಂದಿಗೆ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ನೇರವಾಗಿ ಭೇಟಿ ನೀಡಿ ಪ್ರವೇಶಾತಿ ಪ್ರಕ್ರಿಯೆ ಪೂರ್ಣಗೊಳಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಚೇರಿಯನ್ನು ಅಥವಾ ಮೊಬೈಲ್ ಸಂಖ್ಯೆ 8618682078 ಅನ್ನು ಸಂಪರ್ಕಿಸಬಹುದು ಎಂದು ಕ್ರಿಮ್ಸ್‌ನ ಡೀನ್ ಹಾಗೂ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
