ಕಾರವಾರದ ಕೊಡಿಬಾಗದಲ್ಲಿ ಬೈಕ್–ಕಾರಿನ ಭೀಕರ ಡಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ

ಕಾರವಾರ: ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಕೊಡಿಬಾಗದಲ್ಲಿ ಭಾನುವಾರ ರಾತ್ರಿ ಸುಮಾರು 11 ಗಂಟೆಗೆ ನಡೆದಿದೆ.
ಗೋವಾ–ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಕೊಡಿಬಾಗದಲ್ಲಿ ಈ ಅಪಘಾತ ಸಂಭವಿಸಿದೆ. ಮಾಜಾಳಿ ಕಡೆಯಿಂದ ಕಾರವಾರದತ್ತ ಬರುತ್ತಿದ್ದ ಬೈಕ್‌ಗೆ ಎದುರಿನಿಂದ ಬಂದ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದಲ್ಲಿ ಬೈಕ್ ಸವಾರರಾದ ತೇಜಸ್ವಿ ಪವಾರ್ ಮೃತಪಟ್ಟಿದ್ದು, ಮತ್ತೊಬ್ಬ ಬೈಕ್ ಸವಾರ ಈಶ್ವರ ಆಚಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಕಾರಿನಲ್ಲಿದ್ದ ಇಬ್ಬರು ಪುರುಷರು, ಮೂವರು ಮಹಿಳೆಯರು ಹಾಗೂ ಇಬ್ಬರು ಪುಟ್ಟ ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಡಿಕ್ಕಿಯ ರಭಸಕ್ಕೆ ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಯಿಂದ ಕೆಲಕಾಲ ಹೆದ್ದಾರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
