UK Express Logo
BREAKING

ಕಾರವಾರದಲ್ಲಿ ನ.14ರಂದು ಜಿಲ್ಲಾ ಮಟ್ಟದ ಮಕ್ಕಳ ಹಬ್ಬ; ವಿವಿಧ ಸ್ಪರ್ಧೆಗಳ ಆಯೋಜನೆ

By UKExpress on 11/10/2026

ಕಾರವಾರ: ಮಕ್ಕಳ ದಿನಾಚರಣೆ-2026ರ ಅಂಗವಾಗಿ ಉತ್ತರ ಕನ್ನಡ ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನವೆಂಬರ್ 14ರಂದು ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರವಾರದ ಕಾಜುಬಾಗದಲ್ಲಿರುವ ಮಹಾಸತಿ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 9 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಜಿಲ್ಲೆಯ 3ರಿಂದ 15 ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದಾಗಿದೆ.

ಮಕ್ಕಳಿಗಾಗಿ ವಯೋಮಾನದ ಆಧಾರದ ಮೇಲೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. 3ರಿಂದ 6 ವರ್ಷದ ಮಕ್ಕಳಿಗೆ ವೇಷಭೂಷಣ, ಗಾಯನ ಹಾಗೂ ಲಿಂಬೆ ಚಮಚ ಓಟ ಸ್ಪರ್ಧೆಗಳು ನಡೆಯಲಿವೆ. 7ರಿಂದ 10 ವರ್ಷದ ಮಕ್ಕಳಿಗೆ ಚಿತ್ರಕಲೆ, ವೇಷಭೂಷಣ, ಗಾಯನ ಹಾಗೂ ಗೋಣಿಚೀಲ ಓಟ ಸ್ಪರ್ಧೆಗಳು ನಡೆಯಲಿವೆ. 11ರಿಂದ 15 ವರ್ಷದ ಮಕ್ಕಳಿಗೆ ಪ್ರಬಂಧ, ಚಿತ್ರಕಲೆ ಹಾಗೂ ಗಾಯನ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಲಾಗುವುದು.

ಜಿಲ್ಲೆಯ ಹೆಚ್ಚಿನ ಸಂಖ್ಯೆಯ ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 9845943656 ಅಥವಾ 9036955035 ಸಂಖ್ಯೆಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.