UK Express Logo
BREAKING

ಕಾರವಾರದಲ್ಲಿ ನ.21ರಂದು ತಾಲೂಕು ಮಟ್ಟದ ಚದುರಂಗ ಸ್ಪರ್ಧೆ

By UKExpress on 11/13/2026

ಉತ್ತರ ಕನ್ನಡ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನವೆಂಬರ್ 21ರಂದು ಕಾರವಾರ ತಾಲೂಕು ಮಟ್ಟದ ಚದುರಂಗ (ಚೆಸ್) ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಹಬ್ಬುವಾಡದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಲ್ಲಿ ಸ್ಪರ್ಧೆ ನಡೆಯಲಿದ್ದು, ಭಾಗವಹಿಸಲು ಆಸಕ್ತರು ನವೆಂಬರ್ 19ರ ಸಂಜೆ 6 ಗಂಟೆಯೊಳಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸ್ಪರ್ಧೆಯಲ್ಲಿ ಭಾಗವಹಿಸುವವರು ಕಾರವಾರ ತಾಲೂಕಿನಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಜನನ ಪ್ರಮಾಣಪತ್ರ ಹಾಗೂ ಆಧಾರ್ ಕಾರ್ಡ್‌ನ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕು. ಅಲ್ಲದೆ, ಸ್ಪರ್ಧಾಳುಗಳು ತಮ್ಮದೇ ಚೆಸ್ ಬೋರ್ಡ್ ಮತ್ತು ಕಾಯಿಗಳನ್ನು ತರಬೇಕು.

1ರಿಂದ 7ನೇ ತರಗತಿ ಹಾಗೂ 8ರಿಂದ 10ನೇ ತರಗತಿಯ ಬಾಲಕರು ಮತ್ತು ಬಾಲಕಿಯರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಪ್ರತಿ ವಿಭಾಗದಿಂದ ತಲಾ ಐವರು ಬಾಲಕರು ಮತ್ತು ಐವರು ಬಾಲಕಿಯರು ಸೇರಿದಂತೆ ಒಟ್ಟು 20 ಸ್ಪರ್ಧಾಳುಗಳನ್ನು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಗುತ್ತದೆ.

ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಪ್ರಯಾಣ ಭತ್ಯೆ ಹಾಗೂ ದಿನಭತ್ಯೆ ನೀಡಲಾಗುವುದಿಲ್ಲ. ಯಾವುದೇ ಸಂದರ್ಭದಲ್ಲಿ ಸಂಘಟಕರ ತೀರ್ಮಾನವೇ ಅಂತಿಮವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಥ್ಲೆಟಿಕ್ ತರಬೇತುದಾರ ಶಿವಾನಂದ ನಾಯ್ಕ (ಮೊ. 8722516856) ಅಥವಾ ಕಚೇರಿ ಮೊಬೈಲ್ ಸಂಖ್ಯೆ 9036955035 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.