UK Express Logo

ಕೆಎಸ್‌ಆರ್‌ಟಿಸಿ ಬಸ್–ಇನೋವಾ ಕಾರು ನಡುವೆ ಅಪಘಾತ; ಮೂವರಿಗೆ ಗಂಭೀರ ಗಾಯ

By UKExpress on 10/4/2026

ಕುಮಟಾ: ತಾಲೂಕಿನ ಕೋಡ್ಕಣಿ ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾನುವಾರ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಇನೋವಾ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕುಮಟಾ ಕಡೆಯಿಂದ ಖಂಡಗಾರದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ವೆಲ್‌ಕಮ್‌ ಹೋಟೆಲ್‌ ಬಳಿ ಹೆದ್ದಾರಿ ಕ್ರಾಸ್‌ ಮಾಡುತ್ತಿದ್ದ ವೇಳೆ, ಹಿಂಬದಿಯಿಂದ ಬರುತ್ತಿದ್ದ ಇನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಗಾಯಗೊಂಡ ಮೂವರನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುಮಟಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.