UK Express Logo

ಕ್ರೀಡಾಕೂಟದಲ್ಲಿ ಮಿಂಚಿದ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿನಿಯರು; ಜಿಲ್ಲಾ ಮಟ್ಟಕ್ಕೆ ಆಯ್ಕೆ

By UKExpress on 9/14/2026

ಕಾರವಾರ: ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ 17 ವರ್ಷದೊಳಗಿನ ಬಾಲಕಿಯರ ಖೋ-ಖೋ ಪಂದ್ಯಾವಳಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಯರು ಅತ್ಯುತ್ತಮ ಪ್ರದರ್ಶನ ನೀಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇದೇ ಸಂದರ್ಭದಲ್ಲಿ ವೈಯಕ್ತಿಕ ವಿಭಾಗದಲ್ಲಿಯೂ ಶಾಲೆಯ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ. ರೋಶನಿ ಸಾವಂತ್ ಅವರು ಎತ್ತರ ಜಿಗಿತ, ಅನ್ನಪೂರ್ಣೇಶ್ವರಿ ಹಾವನೂರು ಅವರು ನಡಿಗೆ ಹಾಗೂ ಶಿವಲೀಲಾ ಬಜ್ಜಿ ಅವರು ಚೆಸ್ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಯರ ಈ ಸಾಧನೆಗೆ ಪ್ರಾಂಶುಪಾಲರು, ದೈಹಿಕ ಶಿಕ್ಷಕರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ. ಜಿಲ್ಲಾ ಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತರಲಿ ಎಂದು ವಿದ್ಯಾರ್ಥಿನಿಯರಿಗೆ ಶುಭ ಹಾರೈಸಿದ್ದಾರೆ.