UK Express Logo
BREAKING

ಕ್ರಿಮ್ಸ್‌ನಲ್ಲಿ ಬಿಎಸ್‌ಸಿ ನರ್ಸಿಂಗ್ ಪ್ರವೇಶಕ್ಕೆ ನ.14ರಂದು ವಾಕ್-ಇನ್ ಅಡ್ಮಿಷನ್

By UKExpress on 11/13/2026

ಕಾರವಾರ: ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕ್ರಿಮ್ಸ್) ವತಿಯಿಂದ 2026-27ನೇ ಸಾಲಿನ ಬಿಎಸ್‌ಸಿ ನರ್ಸಿಂಗ್ ಕೋರ್ಸ್‌ನ ಉಳಿದ ಸೀಟುಗಳ ಭರ್ತಿಗಾಗಿ ವಾಕ್-ಇನ್ ಅಡ್ಮಿಷನ್ ಪ್ರಕ್ರಿಯೆ ಆಯೋಜಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂಲಕ ಎಲ್ಲಾ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಉಳಿಕೆಯಾಗಿರುವ ಸೀಟುಗಳನ್ನು ಭರ್ತಿ ಮಾಡಿಕೊಳ್ಳಲು ಅನುಮತಿ ದೊರೆತಿದೆ. ಕ್ರಿಮ್ಸ್‌ನಲ್ಲಿ ಒಟ್ಟು 100 ಬಿಎಸ್‌ಸಿ ನರ್ಸಿಂಗ್ ಸೀಟುಗಳನ್ನು ಭರ್ತಿ ಮಾಡಿಕೊಳ್ಳಲು ಅವಕಾಶವಿದೆ.

ಈ ಹಿನ್ನೆಲೆಯಲ್ಲಿ ನವೆಂಬರ್ 14ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಾರವಾರ ವೈದ್ಯಕೀಯ ಕಾಲೇಜಿನ ಬೋಧನಾ ಕೊಠಡಿ-2ರಲ್ಲಿ ವಾಕ್-ಇನ್ ಅಡ್ಮಿಷನ್ ನಡೆಯಲಿದೆ.

ಕೆಇಎಯಲ್ಲಿ ನೋಂದಾಯಿಸಿಕೊಂಡಿರುವ ಅರ್ಹ ಅಭ್ಯರ್ಥಿಗಳಿಗೆ ಮೆರಿಟ್ ಆಧಾರದ ಮೇಲೆ ಪ್ರವೇಶ ನೀಡಲಾಗುವುದು ಎಂದು ಕ್ರಿಮ್ಸ್ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು: https://krimskarwar.karnataka.gov.in