UK Express Logo

ಕುಮಟಾ ಪೊಲೀಸ್ ಠಾಣೆಯ ನೂತನ ಪಿಐ ಆಗಿ ಕುಸುಮಾಧರ್ ಕೆ. ಅಧಿಕಾರ ಸ್ವೀಕಾರ

By UKExpress on 10/4/2026

ಕುಮಟಾ: ಕುಮಟಾ ಪೊಲೀಸ್ ಠಾಣೆಯ ನೂತನ ಪೊಲೀಸ್ ಇನ್ಸ್‌ಪೆಕ್ಟರ್ (ಪಿಐ) ಆಗಿ ಕುಸುಮಾಧರ್ ಕೆ. ಅವರು ಅಧಿಕಾರ ಸ್ವೀಕರಿಸಿದ್ದಾರೆ.

ಈ ಹಿಂದೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪಿಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಗೇಶ್ ಕೆ.ಎಂ. ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಅವರಿಂದ ತೆರವಾದ ಸ್ಥಾನಕ್ಕೆ ಕುಸುಮಾಧರ್ ಕೆ. ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಅಧಿಕಾರ ಸ್ವೀಕಾರದ ಸಂದರ್ಭದಲ್ಲಿ ನಿರ್ಗಮಿತ ಪಿಐ ಯೋಗೇಶ್ ಕೆ.ಎಂ. ಅವರು ನೂತನ ಪಿಐ ಕುಸುಮಾಧರ್ ಕೆ. ಅವರನ್ನು ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿ, ಅಧಿಕಾರ ಹಸ್ತಾಂತರಿಸಿದರು.

ಇದೇ ವೇಳೆ ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಯೋಗೇಶ್ ಕೆ.ಎಂ. ಅವರನ್ನು ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸನ್ಮಾನಿಸಿ ಗೌರವಪೂರ್ವಕವಾಗಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಪಿಎಸ್‌ಐಗಳಾದ ಖಾದರ್ ಭಾಷಾ, ರವಿ ಗುಡ್ಡಿ ಹಾಗೂ ವಿಠ್ಠಲ್ ಮಲವಡಕರ್ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.