
ಕುಮಟಾ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ 11 ಕೆ.ವಿ. ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ಕೈಗೊಳ್ಳಲಾಗುತ್ತಿರುವುದರಿಂದ ಕುಮಟಾ ತಾಲೂಕಿನ ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಸೆಪ್ಟೆಂಬರ್ 30ರಂದು (ಬುಧವಾರ) ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಕುಮಟಾ ಟೌನ್ ಹಾಗೂ ಗ್ರಾಮೀಣ ಶಾಖೆಯ 11 ಕೆ.ವಿ. ಧಾರೇಶ್ವರ ಮಾರ್ಗದ ಎಲ್ಲಾ ಭಾಗಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಹೆಸ್ಕಾಂ ಕುಮಟಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಕಾಮಗಾರಿ ಅವಧಿಯಲ್ಲಿ ಸಂಬಂಧಪಟ್ಟ ಗ್ರಾಹಕರು ಹೆಸ್ಕಾಂನೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.
