UK Express Logo

ಕುಮಟಾದಲ್ಲಿ ಕಂಟೇನರ್ ಲಾರಿ ಡಿಕ್ಕಿಗೆ ಬೈಕ್ ಸವಾರ ಸಾವು

By UKExpress on 9/9/2026

ಕುಮಟಾ: ಕಂಟೇನರ್ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಮಟಾ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಕುಮಟಾದ ಮಂದಾರ ಹೊಟೆಲ್ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಕಡತೋಕ ಗ್ರಾಮದ ವಿವೇಕ ರಾಮಕೃಷ್ಣ ಶೆಟ್ಟಿ (47) ಮೃತಪಟ್ಟಿದ್ದಾರೆ. ವಿವೇಕ ಅವರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಂಟೇನರ್ ಲಾರಿಗೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸುದ್ದಿ ತಿಳಿಯುತ್ತಿದ್ದಂತೆ ಕುಮಟಾ ಪಿಎಸ್ಐ ಖಾದರ್ ಭಾಷ, ರವಿ ಗುಡ್ಡಿ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸುಗಮಗೊಳಿಸಲಾಯಿತು.

ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.