UK Express Logo

ಸೆ. 10ರಂದು ಕುಮಟಾದಲ್ಲಿ ತಾಲೂಕುಮಟ್ಟದ ದಸರಾ ಕ್ರೀಡಾಕೂಟ

By UKExpress on 9/9/2026

ಕುಮಟಾ: 2026-27ನೇ ಸಾಲಿನ ತಾಲೂಕುಮಟ್ಟದ ದಸರಾ ಕ್ರೀಡಾಕೂಟವು ಸೆ. 10ರಂದು ಪಟ್ಟಣದ ಮಣಕಿ ಮೈದಾನದಲ್ಲಿ ನಡೆಯಲಿದೆ.

ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ 100, 200, 400, 800, 1500, 5000 ಹಾಗೂ 10,000 ಮೀಟರ್ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಟ್ರಿಪಲ್ ಜಂಪ್, ಗುಂಡು ಎಸೆತ, ಜಾವೆಲಿನ್ ಎಸೆತ, ಡಿಸ್ಕಸ್ ಎಸೆತ, ಹರ್ಡಲ್ಸ್ ಹಾಗೂ 4x100 ಮತ್ತು 4x400 ಮೀಟರ್ ರಿಲೇ ಸ್ಪರ್ಧೆಗಳು ನಡೆಯಲಿವೆ.

ಇದರೊಂದಿಗೆ ವಾಲಿಬಾಲ್, ಕಬಡ್ಡಿ, ಖೋ-ಖೋ, ಥ್ರೋಬಾಲ್ ಹಾಗೂ ಯೋಗ ಸೇರಿದಂತೆ ವಿವಿಧ ಗುಂಪು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಬಾಸ್ಕೆಟ್‌ಬಾಲ್, ಶಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನಿಸ್, ಬಾಲ್ ಬ್ಯಾಡ್ಮಿಂಟನ್ ಹಾಗೂ ಹ್ಯಾಂಡ್‌ಬಾಲ್ ಸ್ಪರ್ಧೆಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ನೇರವಾಗಿ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಇದಕ್ಕಾಗಿ ತಾಲೂಕು ಸಹಾಯಕ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿಗಳ ದೃಢೀಕರಣ ಪತ್ರವನ್ನು ಪಡೆದುಕೊಳ್ಳಬೇಕು.

ಈಜು, ನೆಟ್‌ಬಾಲ್ ಹಾಗೂ ಟೆನಿಸ್ ಸ್ಪರ್ಧೆಗಳಿಗೆ ಜಿಲ್ಲಾ ತಂಡದ ಆಯ್ಕೆ ನಡೆಸಿ ವಿಭಾಗಮಟ್ಟದ ಸ್ಪರ್ಧೆಗೆ ಕಳುಹಿಸಲಾಗುವುದು.

ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಕ್ರೀಡಾಪಟುಗಳು ಮತ್ತು ಗುಂಪು ಸ್ಪರ್ಧೆಗಳಲ್ಲಿ ರಿಲೇ ಸೇರಿದಂತೆ ಪ್ರಥಮ ಸ್ಥಾನ ಪಡೆಯುವ ತಂಡಗಳು ಮಾತ್ರ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಲಿವೆ.

ತಂಡಗಳು ಸೆ. 9ರೊಳಗೆ ಕಡ್ಡಾಯವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಕಡ್ಡಾಯವಾಗಿ ಆನ್‌ಲೈನ್ ನೋಂದಣಿ ಮಾಡಿಕೊಂಡು, ಕ್ರೀಡಾಕೂಟದ ದಿನ ನೋಂದಣಿ ಪ್ರತಿಯನ್ನು ತೋರಿಸಬೇಕು. ಆನ್‌ಲೈನ್ ನೋಂದಣಿ ಮಾಡದ ಸ್ಪರ್ಧಾಳುಗಳಿಗೆ ಅವಕಾಶ ಇರುವುದಿಲ್ಲ. ಪಂದ್ಯಾವಳಿ ನಡೆಯುವ ದಿನ ನೋಂದಣಿಗೆ ಬರುವ ತಂಡಗಳಿಗೂ ಅವಕಾಶ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ರಾಘವೇಂದ್ರ ಗಾಂವಕರ ಅವರನ್ನು 9380107509 / 9482496342 ಸಂಪರ್ಕಿಸಬಹುದು.