ಶಿರಸಿ: ಶಿರಸಿ-ವಡ್ಡಿ-ಗೋಕರ್ಣ ರಸ್ತೆಯ ದೇವಿಕಾನ ಹಳ್ಳದ ಬಳಿ ಲಾರಿ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದು, ಬಸ್‌ನಲ್ಲಿದ್ದ ಎಂಟು ಮಂದಿ ಗಾಯಗೊಂಡ ಘಟನೆ ರವಿವಾರ ಮಧ್ಯಾಹ್ನ ಸಂಭವಿಸಿದೆ.
ಲಾರಿ ಚಾಲಕ ಲಾರಿಯನ್ನು ಶಿರಸಿಯಿಂದ ಗೋಕರ್ಣದತ್ತ ಚಲಾಯಿಸಿಕೊಂಡು ಬರುವಾಗ ಅದೇ ಸಮಯಕ್ಕೆ ಮತ್ತಿಘಟ್ಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ಗೆ ನಡುವೆ ಡಿಕ್ಕಿ ಸಂಭವಿಸಿದೆ. ಈ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದೆ.
ಅಪಘಾತದಲ್ಲಿ ಗಾಯಗೊಂಡ ಏಳು ಮಂದಿ ಪ್ರಯಾಣಿಕರನ್ನು ಮತ್ತು ಬಸ್ ಚಾಲಕನಿಗೆ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಶಿರಸಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ