UK Express Logo
BREAKING

ಶಿರಸಿ ಅರಣ್ಯ ಮಹಾವಿದ್ಯಾಲಯ: ಸಹಾಯಕ ಪ್ರಾಧ್ಯಾಪಕರ ಹುದ್ದೆಯ ಸಂದರ್ಶನ ನ.24ಕ್ಕೆ ಮುಂದೂಡಿಕೆ

By UKExpress on 11/13/2026

ಶಿರಸಿ: ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಶಿರಸಿಯ ಅರಣ್ಯ ಮಹಾವಿದ್ಯಾಲಯದಲ್ಲಿ ಕೃಷಿ ಸಂಖ್ಯಾಶಾಸ್ತ್ರ ವಿಷಯ ಬೋಧಿಸಲು ಸಹಾಯಕ ಪ್ರಾಧ್ಯಾಪಕರ ಖಾಲಿ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ/ಅರೆಕಾಲಿಕ ಶಿಕ್ಷಕರ ನೇಮಕಾತಿಗಾಗಿ ನಿಗದಿಪಡಿಸಲಾಗಿದ್ದ ಸಂದರ್ಶನವನ್ನು ಮುಂದೂಡಲಾಗಿದೆ.

179 ದಿನಗಳ ಅವಧಿಗೆ ಮೀರದಂತೆ ಒಬ್ಬ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿತ್ತು. ಈ ಹಿಂದೆ ನವೆಂಬರ್ 18ರಂದು ಬೆಳಗ್ಗೆ 11 ಗಂಟೆಗೆ ನಿಗದಿಯಾಗಿದ್ದ ಸಂದರ್ಶನವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಿ, ಇದೀಗ ನವೆಂಬರ್ 24ರಂದು ಬೆಳಗ್ಗೆ 11 ಗಂಟೆಗೆ ಮರು ನಿಗದಿಪಡಿಸಲಾಗಿದೆ.

ಅಭ್ಯರ್ಥಿಗಳು ಶಿರಸಿಯ ಅರಣ್ಯ ಮಹಾವಿದ್ಯಾಲಯದ ಡೀನ್ (ಅರಣ್ಯ) ಅವರ ಕಾರ್ಯಾಲಯದಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ www.uasd.edu.in ಗೆ ಭೇಟಿ ನೀಡಬಹುದು ಅಥವಾ 9448630255 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಅರಣ್ಯ ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.