ಶಿರಸಿ (ಉ.ಕ.): ಶ್ರೀ ಮಾರಿಕಾಂಬಾ ದೇವಸ್ಥಾನದ ವತಿಯಿಂದ 2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ. (1 & 2), ಪದವಿ (ಬಿ.ಎ., ಬಿ.ಎಸ್ಸಿ., ಬಿ.ಕಾಂ.), ಬಿ.ಬಿ.ಎ., ಬಿ.ಸಿ.ಎ., ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ವೈದ್ಯಕೀಯ, ಮತ್ತು ಡಿಪ್ಲೋಮಾ ಪರೀಕ್ಷೆಗಳಲ್ಲಿ ಶೇ. 70ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಶೈಕ್ಷಣಿಕ ಸಹಾಯ ನೀಡುವ ಬಗ್ಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅರ್ಹತೆಗಳು:
- ಅರ್ಜಿ ಸಲ್ಲಿಸುವವರು ಉತ್ತರ ಕನ್ನಡ ಜಿಲ್ಲೆಯವರಾಗಿರಬೇಕು.
- ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರಬೇಕು. ಅರ್ಹ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 2025ರ ಜುಲೈ 15 ರಿಂದ ಜುಲೈ 31 ರವರೆಗೆ ಅವಕಾಶವಿರುತ್ತದೆ. ಅರ್ಜಿ ಸಲ್ಲಿಸಲು ವೆಬ್‌ಸೈಟ್:
- www.marikambatemple.com
- ಅಥವಾ ನೇರವಾಗಿ: https://marikambatemple.com/Marikamba_trust_apply ಅರ್ಜಿ ಸಲ್ಲಿಸುವಾಗ ಅಪ್‌ಲೋಡ್ ಮಾಡಬೇಕಾದ ದಾಖಲೆಗಳು:
- 2024-25ನೇ ಸಾಲಿನಲ್ಲಿ ಉತ್ತೀರ್ಣರಾದ ತರಗತಿಯ ಅಂಕಪಟ್ಟಿ.
- ಶುಲ್ಕ ರಸೀದಿ (Fee Receipt).
- ಆಧಾರ ಕಾರ್ಡ್‌ನ ದೃಢೀಕೃತ ಪ್ರತಿ.
- ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ.
- ಬಿ.ಪಿ.ಎಲ್. ರೇಶನ್ ಕಾರ್ಡ್‌ನ ಪ್ರತಿ.
- ವಿದ್ಯಾರ್ಥಿ/ವಿದ್ಯಾರ್ಥಿನಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ. ಹೆಚ್ಚಿನ ಮಾಹಿತಿಗಾಗಿ ದೇವಸ್ಥಾನದ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.