UK Express Logo

ಉತ್ತರ ಕನ್ನಡದ ನಾಲ್ವರು ಶಿಕ್ಷಕರಿಗೆ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ

By UKExpress on 9/9/2026

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ನಾಲ್ವರು ಶಿಕ್ಷಕರಿಗೆ 2026-27ನೇ ಸಾಲಿನ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆಯಾಗಿದೆ.

ಪ್ರಾಥಮಿಕ ಶಾಲಾ ವಿಭಾಗದಲ್ಲಿ ಹೊನ್ನಾವರ ನಂ.1 ಸ.ಹಿ.ಪ್ರಾ. ಶಾಲೆಯ ಶಿಕ್ಷಕಿ ಉಷಾ ನಾಯಕ ಹಾಗೂ ಯಲ್ಲಾಪುರದ ಗಣಪತಿಗಲ್ಲಿ ಸ.ಹಿ.ಪ್ರಾ. ಶಾಲೆಯ ಶಿಕ್ಷಕ ರಾಮಚಂದ್ರ ನಾಯ್ಕ ಆಯ್ಕೆಯಾಗಿದ್ದಾರೆ.

ಪ್ರೌಢಶಾಲಾ ವಿಭಾಗದಲ್ಲಿ ಕುಮಟಾದ ಅಘನಾಶಿನಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಮಮತಾ ಆರ್. ನಾಯ್ಕ ಹಾಗೂ ಹಳಿಯಾಳ ಚಿಬ್ಬಲಗೇರಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಸಿದ್ದಪ್ಪ ಬೀರಾದಾರ ವೀರಭದ್ರಪ್ಪ ಅವರಿಗೆ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರಿಗೆ ಕಾರವಾರ ಜಿಲ್ಲಾ ಶಿಕ್ಷಕರ ಸಂಘಟನೆಯ ಜಿಲ್ಲಾ ಅಧ್ಯಕ್ಷ ಎಂ.ಜಿ. ನಾಯ್ಕ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಯ ಅಧ್ಯಕ್ಷ ಸತೀಶ ನಾಯಕ ಅಭಿನಂದನೆ ಸಲ್ಲಿಸಿದ್ದಾರೆ.