ಹಳಿಯಾಳ: ಯಲ್ಲಾಪುರದಿಂದ ಹಳಿಯಾಳಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕರ್ಲಕಟ್ಟಾ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.
ಸಾಂಬ್ರಾಣಿ ಗ್ರಾಮದ ನಿವಾಸಿ ರೂಪಾ ಸಹದೇವ ಮೊರೆ (34) ಮೃತಪಟ್ಟ ಮಹಿಳೆ.ಮಧ್ಯಾಹ್ನ 12:15ರ ಸುಮಾರಿಗೆ ರೂಪಾ ಮೊರೆ ಅವರು ಹಳಿಯಾಳದಿಂದ ಕುರಿಗದ್ದಾ ಇಂದ ಸಾಂಬ್ರಾಣಿ ಕಡೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಯಲ್ಲಾಪುರ ಡಿಪೋದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ನಿರ್ಲಕ್ಷ್ಯ ಹಾಗೂ ಅತಿವೇಗದಿಂದ ಬಸ್ ಚಲಾಯಿಸಿಕೊಂಡು ಬಂದು ರೂಪಾ ಅವರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಲ್ಲಿ ರೂಪಾ ಅವರ ತಲೆ ಮತ್ತು ದೇಹಕ್ಕೆ ತೀವ್ರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಕುರಿತು ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.