
ಯಲ್ಲಾಪುರ: ಯಲ್ಲಾಪುರ ಪೊಲೀಸ್ ಠಾಣೆಯ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿರುವ ಒಟ್ಟು 9 ವಾಹನಗಳನ್ನು ನವೆಂಬರ್ 20ರಂದು ಸಾರ್ವಜನಿಕ ಬಹಿರಂಗ ಹರಾಜು ಮೂಲಕ ಮಾರಾಟ ಮಾಡಲಾಗುತ್ತದೆ.
ಮಾನ್ಯ ಜೆಎಂಎಫ್‌ಸಿ ಯಲ್ಲಾಪುರ ನ್ಯಾಯಾಲಯದ ಆದೇಶದ ಮೇರೆಗೆ ಈ ಹರಾಜು ಪ್ರಕ್ರಿಯೆ ನಡೆಯಲಿದೆ. ಹರಾಜಿಗೆ ಒಳಪಡುವ ವಾಹನಗಳಲ್ಲಿ ಒಂದು ನಾಲ್ಕು ಚಕ್ರದ ವಾಹನ ಹಾಗೂ ಎಂಟು ದ್ವಿಚಕ್ರ ವಾಹನಗಳು ಸೇರಿವೆ.
ನವೆಂಬರ್ 20ರಂದು ಬೆಳಗ್ಗೆ 10 ಗಂಟೆಗೆ ಯಲ್ಲಾಪುರ ಪೊಲೀಸ್ ವಸತಿಗೃಹದ ಸಮೀಪ ಸಾರ್ವಜನಿಕ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಸಾರ್ವಜನಿಕರು ಹರಾಜಿನಲ್ಲಿ ಭಾಗವಹಿಸುವಂತೆ ಯಲ್ಲಾಪುರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
